ವಾಜಪೇಯಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ

Update: 2018-08-17 04:50 GMT

ಹೊಸದಿಲ್ಲಿ, ಆ.17: ನಿನ್ನೆ ಸಂಜೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭಗೊಂಡಿದ್ದು, ದಿಲ್ಲಿಯ ಕೃಷ್ಣಮೆನನ್ ಮಾರ್ಗದಲ್ಲಿರುವ  ವಾಜಪೇಯಿ ಅವರ  ನಿವಾಸದಿಂದ  ಪಾರ್ಥಿವ ಶರೀರವನ್ನು ಬಿಜೆಪಿಯ ಪ್ರಧಾನ ಕಚೇರಿಗೆ ಕೊಂಡೊಯ್ಯಲಾಗುತ್ತದೆ.

ಪುಷ್ಪಾಲಂಕೃತಗೊಂಡ ಸೇನಾ ವಾಹನದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆಯಲ್ಲಿ ಬಿಜೆಪಿ ಪ್ರಧಾನ ಕಚೇರಿಗೆ ಕೊಂಡೊಯ್ಯಲಾಗುತ್ತಿದೆ.ಅಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 1 ಗಂಟೆಗೆ ಮೆರವಣಿಗೆಯ ಮೂಲಕ ಸ್ಮೃತಿ ಸ್ಥಳಕ್ಕೆ ಅಂತಿಮ ಯಾತ್ರೆ ಸಾಗಲಿದೆ. ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಂಜೆ 4 ಗಂಟೆಗೆ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

ವಾಜಪೇಯಿ ಗೌರವಾರ್ಥ ದೇಶಾದ್ಯಂತ ಆ.22ರ ತನಕ 7 ದಿನಗಳ ಶೋಕಾಚರಣೆ  ಮತ್ತು ಕೇಂದ್ರ ಸರಕಾರಿ ಕಚೇರಿಗಳಿಗೆ ಶುಕ್ರವಾರ ಅರ್ಧ ದಿನ ರಜೆ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News