×
Ad

5 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2018-08-17 19:22 IST

ಬೆಂಗಳೂರು, ಆ.17: ರಾಜ್ಯ ಸರಕಾರವು ಐದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಅಂಜುಮ್ ಪರ್ವೆಝ್‌ರನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯನ್ನಾಗಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಾ.ಜೆ.ರವಿಶಂಕರ್‌ರನ್ನು ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎನ್.ಜಯರಾಮ್‌ರನ್ನು ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿದ್ದ ಎಂ.ಕನಗವಲ್ಲಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿರ್ದೇಶಕಿಯಾಗಿದ್ದ ಕೆ.ಜ್ಯೋತಿಯನ್ನು ಮೈಸೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News