ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಆರೋಪಿಗೆ 7 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

Update: 2018-08-17 14:16 GMT

ಬೆಂಗಳೂರು, ಆ.17: ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಆರೋಪಿಗೆ ನಗರದ ಸಿಸಿಎಚ್ 54ನೆ ವಿಶೇಷ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿದೆ.

ಬನಶಂಕರಿಯ ಮಂಜುನಾಥ್ ಕಾಲನಿಯಲ್ಲಿ ವಾಸವಾಗಿದ್ದ ಆರೋಪಿಯಾದ ಕಾಮಣ್ಣ (22) ವಿವಾಹವಾಗಿದ್ದನ್ನು ಮರೆಮಾಚಿ 2014ರ ಡಿ.12ರ ಸಂಜೆ 7ಗಂಟೆಯ ಸುಮಾರಿನಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಈ ಸಂಬಂಧ ಸಿ.ಕೆ.ಅಚ್ಚುಕಟ್ಟು ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ನ್ಯಾಯಾಧೀಶೆ ಎಂ.ಲತಾಕುಮಾರಿ ಆರೋಪಿಗೆ ಕಲಂ 366, 363, 376 ಐಪಿಸಿ ಮತ್ತು 5(ಎಲ್), 6 ಆಫ್ ಪೋಕ್ಸೊ ಕಾಯ್ದೆ ಅಡಿಯಲ್ಲಿ ಆರೋಪ ಸಾಬೀತಾದ ಮೇರೆಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 80 ಸಾವಿರ ರೂ.ದಂಡ ವಿಧಿಸಿ ಆದೇಶಿಸಿದೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News