ಬೆಂಗಳೂರು: ಬೆಳ್ಳಿ ರಥದಲ್ಲಿ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪನಮನ

Update: 2018-08-17 14:26 GMT

ಬೆಂಗಳೂರು, ಆ.17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ವಾಜಪೇಯಿ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿಟ್ಟು ಪುಷ್ಪನಮನ ಸಲ್ಲಿಸುವ ಮೂಲಕ ಸಂತಾಪ ಸೂಚಿಸಿದರು.

ಅನಂತರ ಮೈಸೂರು ಬ್ಯಾಂಕ್ ವೃತ್ತದಿಂದ ಕೆಂಪೇಗೌಡ ಬಸ್ ನಿಲ್ದಾಣದವರೆಗೆ ಮೆರವಣಿಗೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ವಾಜಪೇಯಿ ತ್ಯಾಗ ಅಮರವಾದುದು. ವಾಜಪೇಯಿಗೆ ಕರ್ನಾಟಕದ ಸಂಬಂಧ ತುಂಬಾ ಇದೆ. ಕರ್ನಾಟಕದ ಮೇಲೆ ವಾಜಪೇಯಿಗೆ ಒಂದು ಗೌರವ ಇತ್ತು ಎಂದು ಸ್ಮರಿಸಿದರು.

ಕರ್ನಾಟಕ ಸರಕಾರ ವಾಜಪೇಯಿ ಅವರ ಆಳೆತ್ತರದ ಮೂರ್ತಿ ನಿರ್ಮಾಣ ಮಾಡಬೇಕು ಎಂದು ವಾಟಾಳ್ ನಾಗರಾಜ್ ಇದೇ ವೇಳೆ ಒತ್ತಾಯಿಸಿದರು. ಈ ವೇಳೆ ರಸ್ತೆಯುದ್ದಕ್ಕೂ ಸತ್ಯ ಹರಿಶ್ಚಂದ್ರ ಸಿನಿಮಾದ ಈ ದೇಹದಿಂದ ದೂರವಾದೇ ಏಕೆ ಆತ್ಮವೇ ಹಾಡು ಕೇಳಿಬಂತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News