ಆ.18 ರಂದು ಕೊಡಗು ಜಿಲ್ಲೆಗೆ ಸಿಎಂ ಕುಮಾರಸ್ವಾಮಿ ಭೇಟಿ

Update: 2018-08-17 15:24 GMT

ಬೆಂಗಳೂರು, ಆ. 17: ಭಾರೀ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನಾಳೆ (ಆ.18) ಖುದ್ದು ಭೇಟಿ ನೀಡಲಿದ್ದು, ಪರಿಹಾರ ಕಾರ್ಯಾಚರಣೆ ಪರಿಶೀಲನೆ ನಡೆಸಲಿದ್ದಾರೆ.

ನಾಳೆ ಬೆಳಗ್ಗೆ 10:30ಕ್ಕೆ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಳೆ-ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಆ ಬಳಿಕ ಕೊಡಗು ಜಿಲ್ಲೆಗೆ ತೆರಳಲಿದ್ದಾರೆ.

ರವಿವಾರ (ಆ.19) ಮುಖ್ಯಮಂತ್ರಿ ಕುಮಾರಸ್ವಾಮಿ ಮೈಸೂರಿನ ನಂಜನಗೂಡು, ಕಬಿನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News