ಬೆಂಗಳೂರು: ರೈಲಿಗೆ ಸಿಕ್ಕಿ ವ್ಯಕ್ತಿ ಮೃತ್ಯು
Update: 2018-08-17 22:59 IST
ಬೆಂಗಳೂರು, ಆ.17: ಚಿಂದಿ ಆಯುವ ವ್ಯಕ್ತಿಯೊಬ್ಬ ರೈಲಿಗೆ ಸಿಕ್ಕಿ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೇದರಹಳ್ಳಿ ನಿವಾಸಿ ಇಸ್ಮಾಯಿಲ್(60) ಮೃತಪಟ್ಟ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಯಶವಂತಪುರ-ಚಿಕ್ಕಬಾಣಾವರ ರೈಲ್ವೆ ನಿಲ್ದಾಣದ ಮಧ್ಯೆ ಹಾದುಹೋಗುವ ಶೆಟ್ಟಿಹಳ್ಳಿ ರೈಲ್ವೆ ಗೇಟ್ ಬಳಿ ಗುರುವಾರ ಮಧ್ಯಾಹ್ನ ಈ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾನೆ. ಸುದ್ದಿ ತಿಳಿದ ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ ಎನ್ನಲಾಗಿದೆ.