×
Ad

ಆ.19ರಂದು ಚರ್ಚ್‌ಗಳಲ್ಲಿ ಧನ ಸಂಗ್ರಹ: ಅಲೋಶಿಯಸ್ ಪಾವ್ಲ್ ಡಿಸೋಜ

Update: 2018-08-17 23:09 IST

ಮಂಗಳೂರು, ಆ.17: ಕರ್ನಾಟಕ ಮತ್ತು ಕೇರಳದಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರ ಸಂಖ್ಯೆ ಹೆಚ್ಚುತ್ತಿದೆ. ಸಂತ್ರಸ್ತರಿಗೆ ಆರ್ಥಿಕ ಸಹಾಯ ಒದಗಿಸಲು ಎಲ್ಲ ಚರ್ಚ್‌ಗಳಲ್ಲಿ ಆ.19ರಂದು ಧನ ಸಂಗ್ರಹ ಮಾಡಲು ಸೂಚಿಸಲಾಗಿದೆ ಎಂದು ಧರ್ಮ ಪ್ರಾಂತದ ಬಿಷಪ್ ರೆ.ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪದಿಂದ ಹಲವಾರು ಜನರು ಸಾವು-ನೋವು ಅನುಭವಿಸಿದ್ದಾರೆ. ಈ ವೇಳೆ ಅಪಾರ ಆಸ್ತಿ ಪಾಸ್ತಿ ಹಾನಿಯಾಗಿದೆ. ಈ ಬಗ್ಗೆ ಮಂಗಳೂರು ಕೆಥೋಲಿಕ್ ಧರ್ಮ ಪ್ರಾಂತವು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ನೆರವಾಗಲು ಜನರು ಉದಾರವಾಗಿ ಮುಂದೆ ಬರಬೇಕು ಎಂದು ಅವರು ಮನವಿ ಮಾಡಿದರು.

ಪ್ರಾಕೃತಿಕ ದುರಂತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಕೋರಿ ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿರುವ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News