ಬೆಂಗಳೂರು: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2018-08-18 16:18 GMT

ಬೆಂಗಳೂರು, ಆ.18: ಬೈಕ್‌ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಚಾಮರಾಜಪೇಟೆಯ ರಾಜಾರಾಮ್(25) ಮೃತಪಟ್ಟ ಸವಾರ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಬಳಿ ರಾತ್ರಿ 10:45ರ ವೇಳೆ ಬೈಕಿನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ರಾಜಾರಾಮ್ ಅವರ ಮೇಲೆ ಲಾರಿ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ರಾಜಾರಾಮ್ ಅವರು ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಲಾರಿ ಚಾಲಕನನ್ನು ಬಂಧಿಸಿರುವ ಬ್ಯಾಟರಾಯನಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News