ಉ.ಪ್ರದೇಶ: ತಾಯಿ, ಮಗನ ಹತ್ಯೆ

Update: 2018-08-18 17:07 GMT

ಲಕ್ನೊ, ಆ.18: ಮಹಿಳೆ ಹಾಗೂ ಆಕೆಯ ಪುತ್ರನನ್ನು ಹರಿತವಾದ ಆಯುಧಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಜಲುವನ್ ಜಿಲ್ಲೆಯಲ್ಲಿ ನಡೆದಿದೆ.

55ರ ಹರೆಯದ ಮಹಿಳೆ ಹಾಗೂ ಆಕೆಯ 27 ವರ್ಷದ ಪುತ್ರ ಮೃತಪಟ್ಟವರು. ಮಹಿಳೆಯ ಪತಿ ದೂರದ ನಗರದಲ್ಲಿ ಕೆಲಸ ಮಾಡುತ್ತಿದ್ದು ಮನೆಯಲ್ಲಿ ಮಹಿಳೆ ಹಾಗೂ ಆಕೆಯ ಪುತ್ರ ಮಾತ್ರ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ಅಪರಿಚಿತರು ನಿದ್ದೆಯಲ್ಲಿದ್ದ ಇಬ್ಬರ ಮೇಲೆ ದಾಳಿ ನಡೆಸಿ ಹರಿತವಾದ ಆಯುಧದಿಂದ ಇರಿದು ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ನೆರೆಹೊರೆಯವರನ್ನು ವಿಚಾರಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News