ನಾಲ್ವರು ಮನೆಗಳ್ಳರ ಬಂಧನ: 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

Update: 2018-08-18 17:57 GMT

ಬೆಂಗಳೂರು, ಆ.18: ಮನೆಗಳ್ಳತನ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿರುವ ಚಿಕ್ಕಜಾಲ ಠಾಣಾ ಪೊಲೀಸರು, ಬರೋಬ್ಬರಿ 10 ರೂ. ವೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸುಬ್ರಹ್ಮಣ್ಯಪುರದ ವಸಂತಪುರ ನಿವಾಸಿ ಯಾಸೀರ್, ಇಲ್ಯಾಸ್ ನಗರ ನಿವಾಸಿ ಅಸ್ಲಾಂ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದರು. ತಲಘಟ್ಟಪುರ ಮತ್ತು ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇವರನ್ನು ಬಾಡಿವಾರೆಂಟ್ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 6.25 ಲಕ್ಷ ರೂ. ಮೌಲ್ಯದ 250 ಗ್ರಾಂ ತೂಕದ ಚಿನ್ನದ ಒಡವೆ ಹಗೂ 200 ಗ್ರಾಂ ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅದೇರೀತಿ, ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿ ಆನೇಕಲ್ ತಾಲೂಕಿನ ಹಾರಗದ್ದೆಯ ಮಾದಾಪಟ್ಟಣ ನಿವಾಸಿ ಮುಹಮ್ಮದ್ ನೂರುಲ್ಲಾ ಎಂಬಾತನನ್ನು ಬಂಧಿಸಿ, 3.9 ಲಕ್ಷ ರೂ. ಮೌಲ್ಯದ 140 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News