ಮೆಲ್ಕಾರ್: ತಂಡದಿಂದ ಯುವಕನಿಗೆ ಹಲ್ಲೆ

Update: 2018-08-18 18:03 GMT

ಬಂಟ್ವಾಳ, ಆ.18:  ತಂಡವೊಂದು ಯುವಕನಿಗೆ ಹಲ್ಲೆ ನಡೆಸಿದ ಘಟನೆ ಮೆಲ್ಕಾರ್ ಸಮೀಪದ ಕಾರಾಜೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ದಕ್ಷಣ್ ಮಿತ್ತಮಜಲು ಹಲ್ಲೆಗೊಳಗಾದ ಯುವಕ ಎಂದು ತಿಳಿದುಬಂದಿದೆ.

ಮೇಲ್ಕಾರ್ ಸಮೀಪ ಬೈಕಿನಲ್ಲಿ ಹೋಗುತ್ತಿದ್ದ ಸಂದರ್ಭ ಸುಮಾರು ಏಳು ಜನರಿದ್ದ ತಂಡ  ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಗಾಯಗೊಂಡ ದಕ್ಷಣ್ ನನ್ನು  ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿದು ಶಾಸಕ ರಾಜೇಶ್ ನಾಯ್ಕ್, ಮಡಿಕೇರಿಗೆ ತೆರಳಿದ್ದ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ ಆಸ್ಪತ್ರೆಗೆ ತೆರಳಿ ಗಾಯಾಳುವನ್ನು ವಿಚಾರಿಸಿದರು. ಬಂಟ್ವಾಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News