ಹಬ್ಬದ ಖರ್ಚಿನಲ್ಲಿ ಮಿತವ್ಯಯ ಪಾಲಿಸಿ ನೆರೆ ಸಂತ್ರಸ್ತರಿಗೆ ನೆರವಾಗಿ: ಖಾಝಿ ಬೇಕಲ್ ಉಸ್ತಾದ್ ಕರೆ

Update: 2018-08-19 17:45 GMT

ಮಂಗಳೂರು, ಆ.19: ಕೇರಳ ಮತ್ತು ಕರ್ನಾಟಕದ ಕೊಡಗು ಸೇರಿದಂತೆ ಹಲವೆಡೆ ಉಂಟಾಗಿರುವ ಭೀಕರ ಪ್ರಕೃತಿ ವಿಕೋಪದಲ್ಲಿ ಮನೆ, ಬಂಧುಮಿತ್ರರನ್ನು ಕಳೆದುಕೊಂಡು ಸಂತ್ರಸ್ತರಾಗಿರುವವರಿಗೆ ಸಹಾಯಹಸ್ತ ಚಾಚುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಆದ್ದರಿಂದ ಹಬ್ಬದ ಖರ್ಚಿನಲ್ಲಿ ಮಿತವ್ಯಯ ಪಾಲಿಸಿ ನೆರೆ ಸಂತ್ರಸ್ತರಿಗೆ ನೆರವಾಗಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲಾ ಸಂಯುಕ್ತ ಖಾಝಿ ಮೌಲಾನಾ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಕರೆ ನೀಡಿದ್ದಾರೆ.

ಸಂಕಷ್ಟಕ್ಕೊಳಗಾದವರಿಗೆ ನೆರವಾಗುವುದು ಅಲ್ಲಾಹನಿಗೆ ಅತ್ಯಂತ ಇಷ್ಟದ ಕಾರ್ಯ. ಹಬ್ಬದ ಹೆಸರಿನಲ್ಲಿ ಖರೀದಿ ಹಾಗೂ ಅಮಿತ ಖರ್ಚು ವೆಚ್ಚಗಳನ್ನು ಆದಷ್ಟು ಕಡಿಮೆ ಮಾಡಿ. ಜೊತೆಗೆ ಗರಿಷ್ಠ ಪ್ರಮಾಣದಲ್ಲಿ ಪ್ರಾಕೃತಿಕ ವಿಕೋಪದ ಸಂತ್ರಸ್ತರಿಗೆ ನೆರವಾಗಬೇಕು ಎಂದು ಖಾಝಿ ಹೇಳಿದ್ದಾರೆ.

ಈದ್ ಪೂರ್ವ ಅರಫಾ ದಿನದ ಉಪವಾಸ ಹಾಗೂ ಈದ್ ದಿನದಂದು ಪ್ರಾಕೃತಿಕ ವಿಕೋಪ ಸಂತ್ರಸ್ತರಿಗಾಗಿ ಪ್ರಾರ್ಥಿಸಲು ಪಿ.ಎಂ.ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಕರೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News