ಕೊಡಗಿನ ನಿರಾಶ್ರಿತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ

Update: 2018-08-19 19:16 GMT

ಬೆಂಗಳೂರು, ಆ.19: ಮಹಾಮಳೆಯಿಂದ ತತ್ತರಿಸಿರುವ ಕೊಡಗು ಜಿಲ್ಲೆಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಟಲ್ ನಾಗರಾಜ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಡಗು ನರಕ ಸದೃಶ್ಯವಾಗಿದೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿದ್ದಾರೆ. ಇವರಿಗಾಗಿ ದೇಶಾದ್ಯಂತ ನೆರವಿನ ಮಹಾಪೂರವೆ ಹರಿದು ಬರುತ್ತಿದೆ. ಅದಕ್ಕೆ ಪೂರಕವಾಗಿ ರಾಜ್ಯ ಸರಕಾರವು ಎಲ್ಲ ರೀತಿಯ ನೆರವನ್ನು ಸಂತ್ರಸ್ತರಿಗೆ ನೀಡಬೇಕೆಂದು ಒತ್ತಾಯಿಸಿದರು.

ತಲಾ 25ಲಕ್ಷ ರೂ.ಪರಿಹಾರ: ಕೊಡಗಿನ ಮಂದಿ ತಮ್ಮ ಮನೆ, ಕೃಷಿ ಭೂಮಿಯನ್ನು ಸಂಪೂರ್ಣವಾಗಿ ಕಳೆದು ಕೊಂಡಿದ್ದಾರೆ. ಇಲ್ಲಿನ ನಿರಾಶ್ರಿತರು ಹೊಸದಾಗಿಯೆ ಬದುಕನ್ನು ಕಟ್ಟಿಕೊಳ್ಳಬೇಕಿದೆ. ಹೀಗಾಗಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ ತಲಾ 25ಲಕ್ಷ ರೂ.ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News