ಕೇರಳದಲ್ಲಿ ತಗ್ಗಿದ ಮಳೆ, ಪರಿಹಾರ ಕಾರ್ಯಾಚರಣೆ ಮತ್ತಷ್ಟು ಬಿರುಸು

Update: 2018-08-20 06:32 GMT

ತಿರುವನಂತಪುರ, ಆ.20: ಮಹಾಮಳೆಯ ಅನಾಹುತಗಳಿಂದ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಇದೇ ಮೊದಲ ಬಾರಿ ಮಳೆ ಕಡಿಮೆಯಾಗಿದ್ದು ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಮತ್ತಷ್ಟು ವೇಗ ಲಭಿಸಿದೆ.

ಮುಂದಿನ ಐದು ದಿನಗಳ ಕಾಲ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ತುಸು ಸಮಾಧಾನ ತಂದಿದೆ.

ಇದೇ ವೇಳೆ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಸಂಸದರು ತಮ್ಮ ಒಂದು ತಿಂಗಳ ವೇತನವನ್ನು ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ದೇಣಿಗೆ ನೀಡಲು ನಿರ್ಧರಿಸಿದ್ದಾರೆ.

ಬೆಂಗಳೂರಿನ ವಿದ್ಯಾರ್ಥಿಗಳು ಪ್ಯಾಕೇಟ್ ಮನಿ ಹಾಗೂ ಶಿಕ್ಷಕರು ತಮ್ಮ ಒಂದು ತಿಂಗಳ ಸಂಬಳವನ್ನು ನೆರೆ ಪೀಡಿತ ಕೇರಳಕ್ಕೆ ಕಳುಹಿಸಿಕೊಡಲು ಮುಂದಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News