ಕೇರಳ ಪ್ರಾಕೃತಿಕ ವಿಕೋಪ ಪರಿಹಾರ: ಸಿಪಿಎಂನಿಂದ ನಿಧಿ ಸಂಗ್ರಹ ಅಭಿಯಾನ

Update: 2018-08-20 11:58 GMT

ಮಂಗಳೂರು, ಆ.20: ಕೇರಳದಲ್ಲಿ ಸಂಭವಿಸಿದ ಮಳೆ ಹಾಗೂ ಪ್ರವಾಹದಿಂದ ಮೃತಪಟ್ಟ ಕುಟುಂಬಸ್ಥರಿಗೆ ಮತ್ತು ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಸೋಮವಾರ ದ.ಕ.ಜಿಲ್ಲಾಧಿಕಾರಿಯ ಕಚೇರಿ ಮುಂದೆ ನಿಧಿ ಸಂಗ್ರಹ ಅಭಿಯಾನಕ್ಕೆ ಸಿಪಿಎಂ ಹಿರಿಯ ಮುಖಂಡ ಕೆ.ಆರ್. ಶ್ರೀಯಾನ್ ಅಭಿಯಾನಕ್ಕೆ ಚಾಲನೆ ನೀಡಿದರು.

ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಮಾತನಾಡಿ, ಸಂತ್ರಸ್ತರಿಗೆ ನೆರವು ನೀಡುವಲ್ಲಿಯೂ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಆಡಳಿತ ಇದೆಯೆಂಬ ಕಾರಣಕ್ಕೆ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ, ಕೇರಳಕ್ಕೆ ಅಲ್ಪಪ್ರಮಾಣದ ತುರ್ತು ಪರಿಹಾರವನ್ನು ನೀಡಿದೆ ಎಂದು ಆರೋಪಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿದರು. ಈ ಸಂದರ್ಭ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ. ಬಾಲಕೃಷ್ಣ ಶೆಟ್ಟಿ, ಯಾದವ ಶೆಟ್ಟಿ, ವಾಸುದೇವ ಉಚ್ಚಿಲ, ಜಿಲ್ಲಾ ಸಮಿತಿ ಸದಸ್ಯರಾದ ಜಯಂತಿ ಬಿ. ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಸಂತೋಷ್ ಬಜಾಲ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News