ಎಕ್ಸಲೆಂಟ್: ಪ್ರತಿಭಾವಂತರಿಗೆ ಗೌರವ ಸನ್ಮಾನ

Update: 2018-08-20 13:04 GMT

ಮೂಡುಬಿದಿರೆ, ಅ.20: ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲೇ ಅತ್ಯುತ್ತಮ ಸಾಧನೆಗೈದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು 72ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಪುರಸ್ಕರಿಸಲಾಯಿತು.

ದ್ವಿತೀಯ ಪ.ಪೂ.ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯದಲ್ಲಿ 5ನೇ ಸ್ಥಾನ ಗಳಿಸಿದ ವೈಭವ್ ಎಸ್ ಭದ್ರಿ, 9ನೇ ಸ್ಥಾನ ಪಡೆದ ಹೇಮಂತ್ ಕೆ ಹೆಗಡೆ, ನೀಟ್ ರ್ಯಾಂಕಿಂಗ್‌ನಲ್ಲಿ 34ನೇ ಸ್ಥಾನ ಹಾಗೂ ಮೂಡುಬಿದಿರೆ ವಲಯದಲ್ಲಿ ಪ್ರಥಮ ಸ್ಥಾನ ಪಡೆದ ಯಶವಂತ ಆರ್ ಅವರಿಗೆ ಗೌರವ ಸನ್ಮಾನದೊಂದಿಗೆ ಒಂದು ಲಕ್ಷ ರೂಪಾಯಿಗಳ ನಗದು ಪುರಸ್ಕಾರವನ್ನು ನೀಡಲಾಯಿತು. ಅತ್ಯುತ್ತಮ ಅಂಕಗಳಿಸಿದ ಸಾತ್ವಿಕ್, ಇಶಾ ಎಲ್ ಶೆಟ್ಟಿ ಅವರನ್ನು ಕೂಡಾ ಈ ಸಂದರ್ಭದಲ್ಲಿ ಗೌರವಿಸಲಾಯಿತು. ಸಿ.ಎ, ಸಿ.ಪಿ.ಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿಘ್ನೇಶ್ ಕಾಮತ್, ಪ್ರಜ್ವಲ್ ಟಿ.ಎಸ್ ಅವರನ್ನು ಅಭಿನಂದಿಸಲಾಯಿತು.

ಎಕ್ಸಲೆಂಟ್ ಸಮೂಹ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆಗೈದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿಧ್ಯಾರ್ಥಿವೇತನವನ್ನು ವಿತರಿಸಲಾಯಿತು. ಮಾತೃಸಂಸ್ಥೆ ಇನೋವೇಟಿವ್ ಲರ್ನಿಂಗ್ ಪೌಂಡೇಶನ್ ವತಿಯಿಂದ 47 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಸೌಲಭ್ಯವನ್ನು ಪ್ರಕಟಿಸಲಾಯಿತು.

ಪ್ರಖ್ಯಾತ ಕ್ಯಾನ್ಸರ್ ತಜ್ಞ ಡಾಕೃಷ್ಣಪ್ರಸಾದ್, ಖ್ಯಾತ ಸ್ರ್ರೀರೋಗ ತಜ್ಞೆ ಡಾರಶ್ಮಿ ಮುಖ್ಯ ಅತಿಥಿಗಳಾಗಿದ್ದರು. ಆಡಳಿತ ಮಂಡಳಿ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿಯ ಸದಸ್ಯರಾದ ದಿನೇಶ್ ಆನಡ್ಕ, ಮೋಹನ್ ಹೆಗಡೆ, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಗುರುಪ್ರಸಾದ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ಉಪನ್ಯಾಸಕರಾದ ಸ್ವರಾಜ್ ಪಾಲ್ ಅಭಿನಂದನಾ ಕಾರ್ಯಕ್ರಮ ನಡೆಸಿಕೊಟ್ಟರು. ವಿಮಲ್ ರಾಜ್ ಕಾರ್ಯಕ್ರಮ ನಿರೂಪಿಸಿದರು. ದೀಪಕ್ ಕಜೆಕಾರು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News