ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

Update: 2018-08-20 16:10 GMT

ಉಡುಪಿ, ಆ.20: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಆ.24ರಂದು ಬೆಳಗ್ಗೆ 11ರಿಂದ ಅಪರಾಹ್ನ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ, 28ರಂದು ಬೆಳಗ್ಗೆ 11ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ 29ರಂದು ಬೆಳಗ್ಗೆ 11ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟಂತೆ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದು. ಹೆಚ್ಚಿನ ಮಾಹಿತಿಗೆ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ (ದೂರವಾಣಿ ಸಂಖ್ಯೆ 0820-2527770), ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ (ದೂರವಾಣಿ:0820-2536661) ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಉಡುಪಿ ಪೊಲೀಸ್ ವಿಭಾಗದ ಪೊಲೀಸ್ ಉಪಾಧೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News