ಶಿಕ್ಷಣ ಸಂಸ್ಥೆಗಳ ಮತ್ತು ಪಾಲಕರ ಜವಾಬ್ದಾರಿ ಹೆಚ್ಚಿದೆ: ಡಾ. ಎಂ. ಮೋಹನ್ ಆಳ್ವ

Update: 2018-08-20 16:47 GMT

ಮೂಡುಬಿದಿರೆ, ಆ. 20 : ಪ್ರಸ್ತುತ ಶೈಕ್ಷಣಿಕ ಸಂದರ್ಭ ಸ್ಪರ್ಧೆಯಿಂದ ಕೂಡಿದೆ. ಈ ಹೊತ್ತಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಕರ ಜವಾಬ್ದಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸವಾಲುಗಳಿಗೆ ಸಿದ್ಧಪಡಿಸುವ ಜವಾಬ್ದಾರಿ ಇಬ್ಬರ ಮೇಲೂ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷರು ನುಡಿದರು. ಅವರು ಆಳ್ವಾಸ್ ಪದವಿಪೂರ್ವ ಶಿಕ್ಷಣ ಸಂಸ್ಥೆಯ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ.ಯ ವಿಜ್ಞಾನ , ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪಾಲಕರ ಸಭೆಯಲ್ಲಿ ಪಾಲಕರನ್ನು ಉದ್ದೇಶಿಸಿ ಮಾತನಾಡಿದರು.

ಮಕ್ಕಳಿಗೆ ಅನಗತ್ಯ ಒತ್ತಡಗಳನ್ನು ಹೇರದೆ ವಿದ್ಯಾರ್ಥಿಗಳನ್ನು ಓದಿಗೆ ಪ್ರೋತ್ಸಾಹಿಸಬೇಕು. ವಸತಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ಓದುವ ವಾತಾವರಣವನ್ನು ಕಲ್ಪಿಸಲಾಗಿದೆ. ಇದಕ್ಕಾಗಿ ನಿಲಯಪಾಲಕರನ್ನೂ ವಿದ್ಯಾರ್ಥಿ ಕ್ಷೇಮ ಪಾಲಕರನ್ನೂ ಮಾತ್ರವಲ್ಲದೆ ನಿಲಯ ಶಿಕ್ಷಕರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳ ಪುನಶ್ಚೇತನಕ್ಕಾಗಿ ಆಗಾಗ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಕ್ತಿತ್ವವನ್ನು ರೂಪಿಸುವುದು ನಮ್ಮ ಸಂಸ್ಥೆಯ ಉದ್ದೇಶವಾಗಿದೆ ಎಂದು ಡಾ. ಎಂ. ಮೋಹನ್ ಆಳ್ವ ಅವರು ನಮ್ಮ ಶೈಕ್ಷಣಿಕ ಕಲಿಕಾ ಯೋಜನೆಗಳನ್ನು ವಿವರಿಸಿದರು.

ವಿದ್ಯಾರ್ಥಿಗಳ ಪಾಲಕರ ಸಭೆಯಲ್ಲಿ ಸುಮಾರು ಹತ್ತು ಸಾವಿರ ಪಾಲಕರು ಭಾಗವಹಿಸಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ರಮೇಶ್ ಶೆಟ್ಟಿಯವರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ಶ್ರೀ ವೇಣುಗೋಪಾಲ ಶೆಟ್ಟಿ ಮತ್ತು ಉದಯ ಮಂಜುನಾಥ ಆಡೇಮನೆಯವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News