ಮೈಸೂರು ಮಹಾನಗರ ಪಾಲಿಕೆ ಚುನಾವಣೆ: ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Update: 2018-08-20 17:24 GMT

ಮೈಸೂರು,ಆ.20: ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಇಂದು ಕಡೆಯ ದಿನವಾದ ಹಿನ್ನಲೆಯಲ್ಲಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲು ಮುಗಿಬಿದ್ದರು.

ಮೈಸೂರು ನಗರದ 65 ವಾರ್ಡ್‍ಗಳಿಗೆ ನಡೆಯುವ ಚುನಾವಣೆಗೆ ಅಂತಿಮ ದಿನವಾದ ಸೋಮವಾರ ಮೈಸೂರು ಮಹಾನಗರ ಪಾಲಿಕೆ ಕಚೇರಿ, ವಲಯ ಕಚೇರಿ, ಕಾಡಾ ಕಚೇರಿಗಳಲ್ಲಿ ಆಯಾ ವಾರ್ಡ್‍ಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್, ಜಾ.ದಳ, ಬಿಜೆಪಿ ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೊಷಿಸಿದ್ದು, ಮೂರು ಪಕ್ಷಗಳಲ್ಲಿ ಹೊಬರಿಗೆ ಹೆಚ್ಚಾಗಿ ಅವಕಾಸ ಕಲ್ಪಿಸಲಾಗಿದೆ. ಇನ್ನು ಎಸ್.ಡಿ.ಪಿ.ಐ ಪಕ್ಷ ಕೂಡ ತಮ್ಮ ಅಭ್ಯರ್ಥಿಗಳನ್ನು ಹಲವು ವಾರ್ಡ್‍ಗಳಲ್ಲಿ ಕಣಕ್ಕಿಳಿಸಿದೆ. ಸ್ವರಾಜ್ ಇಂಡಿಯಾ ಪಕ್ಷದಿಂದಲೂ ಕೆಲವು ವಾರ್ಡ್‍ಗಳಿಗೆ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಹಾಲಿ ನಗರಪಾಲಿಕೆ ಸದಸ್ಯರಾಗಿದ್ದ ಮಾಜಿ ಮಹಾಪೌರರುಗಳು ಈ ಬಾರಿ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕೆಲವರಿಗೆ ಮೀಸಲಾತಿ ಬದಲಾವಣೆಯಿಂದ ಅವಕಾಶ ತಪ್ಪಿದೆ. 

ಬಿಜೆಪಿಯಲ್ಲಿ ಬಂಡಾಯದ ಬಿಸಿ: ನಾಮ ಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಇಂದು ಬಿಜೆಪಿ ಮಹಾನಗರ ಪಾಲಿಕೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಬಹುತೇಕ ಹಾಲಿ ಸದಸ್ಯರಿಗೆ ಟಿಕಟ್ ನಿರಾಕರಿಸಲಾಗಿದೆ. ಇದರಿಂದ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ.
ಹಾಲಿ ಸದಸ್ಯರಾಗಿದ್ದ ಬಾಲಸುಬ್ರಮಣ್ಯ (ಸ್ನೇಕ್ ಶ್ಯಾಮ್) ಮಾ.ವಿ.ರಾಮ್‍ಪ್ರಸಾದ್ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News