ಮೈಸೂರು: ಡಿ.ದೇವರಾಜ್ ಅರಸ್ 103ನೇ ಜಯಂತಿ ಆಚರಣೆ

Update: 2018-08-20 17:31 GMT

ಮೈಸೂರು,ಆ.20: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ದಿ.ಡಿ.ದೇವರಾಜ್ ಅರಸ್ ಅವರ 103ನೇ ಹುಟ್ಟುಹಬ್ಬವನ್ನು ಪಡುವಾರಹಳ್ಳಿಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ದೇವರಾಜ್ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಅರ್ಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಾಕಷ್ಟು ಜನಪ್ರಿಯ ಯೋಜನೆಗಳನ್ನು ರೂಪಿಸುವ ಮೂಲಕ ಹಿಂದುಳಿದ, ದೀನದಲಿತ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿದ ಮಹಾನ್ ಚೇತನ ದಿ.ದೇವರಾಜ್ ಅರಸ್ ಅವರು ಎಂದು ಬಣ್ಣಿಸಿದರು. ವಿದ್ಯಾರ್ಥಿಗಳು ಅವರ ಆದರ್ಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂದು ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದರು, ಅವರ ಅಧಿಕಾರವಧಿಯ ಸಂಪೂರ್ಣ ಸಮಯವನ್ನು ಜನರೊಂದಿಗೆ ಕಳೆದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್, ಸಮಾಜ ಮತ್ತು ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋಮಶೇಖರ್,ವಿದ್ಯಾರ್ಥಿನಿಲಯದ ಮುಖ್ಯಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News