ಶಾಂತಿಯುತ ಬಕ್ರೀದ್ ಹಬ್ಬ ಆಚರಣೆ: ಡಿಸಿ, ಎಸ್ಪಿಗೆ ಮನವಿ
Update: 2018-08-21 19:26 IST
ಉಡುಪಿ, ಆ.21: ತ್ಯಾಗ ಬಲಿದಾನಗಳ ಹಬ್ಬವಾದ ಈದುಲ್ ಅಝ್ಹಾವನ್ನು ಶಾಂತಿಯುತ ಮತ್ತು ಸೌಹಾರ್ದಯುತವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟವು ಸೋಮವಾರ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೋಮವಾರ ಮನವಿ ಸಲ್ಲಿಸಿತು.
ಹಬ್ಬದ ಆಚರಣೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಹಿಂದಿನಿಂದಲೂ ಮುಂದುವದಿದ್ದು ಇದೇ ತಿಂಗಳ 22ರಿಂದ 25ರವರೆಗೆ ನಡೆಯುವ ಈ ಹಬ್ಬದ ಧಾರ್ಮಿಕ ಆಚರಣೆಯಲ್ಲಿ ಅಡ್ಡಿಯುಂಟಾಗದ ರೀತಿ ಯಲ್ಲಿ ಶಾಂತಿಯುತವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿದೆ.
ನಿಯೋಗದಲ್ಲಿ ಅಬ್ದುಲ್ ಅಝೀಝ್ ಉದ್ಯಾವರ, ಸಲಾವುದ್ದೀನ್ ಅಬ್ದುಲ್ಲಾ, ತಾಜುದ್ದೀನ್, ಶಹಜಾನ್ ತೋನ್ಸೆ, ಅಝೀಮ್, ಕಾಸಿಂ ಬಾರ ಕೂರು ಮೊದಲಾದವರು ಉಪಸ್ಥಿತರಿದ್ದರು.