ಬಾಳೆಬರೆ ಘಾಟ್: ಭಾರೀ ವಾಹನಗಳ ಸಂಚಾರ ನಿಷೇಧ
Update: 2018-08-21 20:03 IST
ಉಡುಪಿ, ಆ.21: ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮಾರ್ಗದಲ್ಲಿ ಈಗ ಅಧಿಕ ಭಾರ ಹೊತ್ತ ಸರಕು-ಸಾಗಾಟ ವಾಹನಗಳು ಸಂಚರಿಸುತ್ತಿರುವುದರಿಂದ ರಸ್ತೆ ಹಾಗೂ ಸೇತುವೆಗಳು ಹಾಳಾಗುವ ಸಾದ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ (ಆ.21) ಮುಂದಿನ ಆದೇಶದವರೆಗೆ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮಾರ್ಗದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಕುಂದಾಪುರದ ಮೂಲಕ ಸಂಚರಿಸುವ ಎಲ್ಲಾ ರೀತಿಯ ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್, ಪಿಷ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್ಸ್, ಟ್ರಕ್ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಬಾರದ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.