×
Ad

ಚುನಾವಣೆಯಲ್ಲಿ ಸಮನ್ವಯದಿಂದ ಕಾರ್ಯ ನಿರ್ವಹಿಸಿ : ಶಿವರಾಜು

Update: 2018-08-21 20:05 IST

ಉಡುಪಿ, ಆ.21: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸಾಮಾನ್ಯ ವೀಕ್ಷಕರಾದ ಶಿವರಾಜು ತಿಳಿಸಿದ್ದಾರೆ.
ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಿರುವ ಎಂಸಿಎಂಸಿ ಕೊಠಡಿಗೆ ಭೇಟಿ ನೀಡಿ ಅವರು ಮಾತನಾಡಿದರು.

ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಎಲ್ಲಾ ಸಿಬ್ಬಂದಿಗಳು ಚುನಾವಣೆ ಶಾಂತಿಯುತವಾಗಿ ನಡೆಯಲು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ದಲ್ಗಿ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳನ್ನು ಅಥವಾ ತಮ್ಮನ್ನು ಯಾವುದೇ ಸಮಯದಲ್ಲಿ ಸಂಪರ್ಕಿಸುವಂತೆ ಅವರು ತಿಳಿಸಿದರು.

ವೆಚ್ಚ ವೀಕ್ಷಕ ಗಂಗಾಧರ್ ಹಾಗೂ ಚುನಾವಣಾ ಶಾಖೆಯ ಸಂಪತ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News