ಸ್ಥಳೀಯ ಸಂಸ್ಥೆ ಚುನಾವಣೆ: ಜಾಹೀರಾತಿಗೆ ಎಂಸಿಎಂಸಿ ಅನುಮತಿ ಅಗತ್ಯ
Update: 2018-08-21 20:45 IST
ಉಡುಪಿ, ಆ.21: ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಪಕ್ಷದ ಅಥವಾ ವೈಯಕ್ತಿಕ ಚುನಾವಣಾ ಪ್ರಚಾರವನ್ನು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಮಾಡಲು ಉಡುಪಿ ನಗರಸಭಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಎಂಸಿಎಂಸಿ ಸಮಿತಿಯ ಮೂಲಕ ಅನುಮತಿ ಪಡೆಯಬೇಕಾಗಿದೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಮೊದಲನೇ ಮಹಡಿಯಲ್ಲಿ ಆರಂಭಿಸಿರುವ ಎಂಸಿಎಂಸಿ ಕಚೇರಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಅ್ಯರ್ಥಿಗಳು ತಮ್ಮ ಪಕ್ಷದ ಅಥವಾ ವೈಯಕ್ತಿಕ ಚುನಾವಣಾ ಪ್ರಚಾರವನ್ನು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಮಾಡುವ ಬಗ್ಗೆ ಸೂಕ್ತ ದಾಖಲೆ ಗಳನ್ನು ಸಲ್ಲಿಸಿ ಅನುಮತಿ ಪಡೆದು ಪ್ರಚಾರ ಮಾಡುವಂತೆ ತಿಳಿಸಲಾಗಿದೆ.
ಅಭ್ಯರ್ಥಿಗಳು ಬೆಳಗ್ಗೆ 10ರಿಂದ ಸಂಜೆ 5:00ರವರೆಗೆ ಎಂಸಿಎಂಸಿ ಸಮಿತಿಗೆ ಅರ್ಜಿ ಸಲ್ಲಿಸಿ, ಅನುಮತಿ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.