×
Ad

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ತುರ್ತು ವೈದ್ಯಕೀಯ ನೆರವು ತಂಡ ರಚನೆ: ಉಡುಪಿ ಡಿಸಿ

Update: 2018-08-21 20:48 IST

ಉಡುಪಿ, ಆ.21: ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಪ್ರಾಕೃತಿಕ ವಿಕೋಪಗಳು ಉಂಟಾದಲ್ಲಿ ಆರೋಗ್ಯ ನೆರವು ನೀಡಲು ತುರ್ತು ವೈದ್ಯಕೀಯ ನೆರವು (ರ್ಯಾಪಿಡ್ ರೆಸ್ಪಾನ್ಸ್ ಟೀಮ್) ತಂಡವನ್ನು ಮುಂಜಾಗ್ರತಾ ಕ್ರಮವಾಗಿ ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಅತಿವೃಷ್ಠಿಗೆ ಸಿಲುಕಿ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿರುವ ಸಾರ್ವಜನಿಕರಿಗೆ ತಕ್ಷಣದಲ್ಲಿ ವೈದ್ಯಕೀಯ ನೆರವು ನೀಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ನುರಿತ ತಜ್ಞರನ್ನು ಒಳಗೊಂಡ ವೈದ್ಯರ, ಅಧಿಕಾರಿ ಗಳ ಮತ್ತು ಸಹಾಯಕರ ತಂಡವನ್ನು ರಚಿಸಲಾಗಿದೆ. ವಿಕೋಪ ಸಂದಭರ್ದಲ್ಲಿ ಪ್ರಾಣ ಹಾನಿ ತಡೆಯಲು ಈ ತಂಡ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಕೋಪ ಸಂದರ್ಭದಲ್ಲಿ ಅಗತ್ಯ ಔಷಧಗಳಿಗೆ ಯಾವುದೇ ಕೊರತೆ ಯಾಗದಂತೆ ಔಷಧಿಗಳನ್ನು ಸೂಕ್ತವಾಗಿ ದಾಸ್ತಾನು ಮಾಡಿಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅತಿವೃಷ್ಠಿ ಸಂದರ್ದಲ್ಲಿ ನೀರಿನಿಂದ ಬರಬಹುದಾದ ರೋಗಗಳು ಮತ್ತು ಅವುಗಳನ್ನು ತಡೆಯುವ ಕುರಿತಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಜಾಗೃತವಾಗಿರುವಂತೆ ತಿಳಿಸಿದರು.

ನೆರೆ ಪೀಡಿತ ಪ್ರದೇಶದಲ್ಲಿ ನೀರನ್ನು ಚೆನ್ನಾಗಿ ಕುದಿಸಿ ಆರಿಸಿ ಕುಡಿಯಲು ಹಾಗೂ ಹಾಲೋಜಿನ್ ಮಾತ್ರೆಯನ್ನು ಕುಡಿಯುವ ನೀರಿಗೆ ಹಾಕಿ ಬಳಕೆ ಮಾಡುವಂತೆ ವ್ಯಾಪಕ ಅರಿವು ಮೂಡಿಸುವಂತೆ ತಿಳಿಸಿದ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಕುಡಿಯುವ ನೀರಿನ ಎಲ್ಲಾ ಮೂಲಗಳಿಗೆ ಸೂಕ್ತ ರೀತಿಯಲ್ಲಿ ಕ್ಲೋರಿನೇಷನ್ ಮಾಡಿಸುವಂತೆಯೂ ಸೂಚಿಸಿದರು.

ಎಲ್ಲಾ ಮೂಲಗಳ ಸುತ್ತ ನೀರು ನಿಲ್ಲದಂತೆ, ಅದು ಸರಿಯಾಗಿ ಹರಿದು ಹೋಗುವಂತೆ ನೋಡಿಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಗಳ ಬಗ್ಗೆ ಅರಿವು ಮೂಡಿಸುವಂತೆಯೂ ಅವರು ಅಧಿಕಾರಿಗೆ ತಿಳಿಸಿದರು.

ಎಲ್ಲಾ ಮೂಲಗಳ ಸುತ್ತ ನೀರು ನಿಲ್ಲದಂತೆ, ಅದು ಸರಿಯಾಗಿ ಹರಿದು ಹೋಗುವಂತೆ ನೋಡಿಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಗಳ ಬಗ್ಗೆ ಅರಿವು ಮೂಡಿಸುವಂತೆಯೂ ಅವರು ಅಧಿಕಾರಿಗೆ ತಿಳಿಸಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಡಿಹೆಚ್‌ಓ ಡಾ.ರೋಹಿಣಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News