ಬ್ರಹ್ಮಾವರ: ಅಪರಿಚಿತ ವಾಹನ ಢಿಕ್ಕಿ; ಪಾದಾಚಾರಿ ಮೃತ್ಯು
Update: 2018-08-21 21:46 IST
ಬ್ರಹ್ಮಾವರ, ಆ.21: ಉಪ್ಪೂರು ಗ್ರಾಮದ ಹೇರೂರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ.21ರಂದು ಬೆಳಗಿನ ಜಾವ 6ಗಂಟೆ ಸುಮಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ತೆಕ್ಕಟ್ಟೆಯ ಐತ(55) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವಾಹನವೊಂದು ನಡೆದು ಕೊಂಡು ಹೋಗುತ್ತಿದ್ದ ಐತ ಅವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳದಲ್ಲೇ ಮೃತ ಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.