×
Ad

ಕಥುವಾ ಪ್ರಕರಣದ ಸಾಕ್ಷಿಗಳಿಗೆ ಕಸ್ಟಡಿಯಲ್ಲಿ ಹಿಂಸೆ

Update: 2018-08-21 21:58 IST

ಹೊಸದಿಲ್ಲಿ, ಆ. 21: ಕಥುವಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಸಾಕ್ಷಿಗಳಿಗೆ ಪೊಲೀಸ್ ಕಸ್ಟಡಿಯಲ್ಲಿ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಮನವಿಗೆ ಆಗಸ್ಟ್ 27ರ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಜಮ್ಮು ಹಾಗೂ ಕಾಶ್ಮೀರ ಸರಕಾರಕ್ಕೆ ನಿರ್ದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ ಅವರನ್ನು ಒಳಗೊಂಡ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ನಿಗದಿಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News