ವೈ.ಎಸ್.ವಿ.ದತ್ತ ಪತ್ನಿ ವಿಧಿವಶ: ಮುಖ್ಯಮಂತ್ರಿ ಸಂತಾಪ
Update: 2018-08-22 23:23 IST
ಬೆಂಗಳೂರು, ಆ. 22: ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರ ಪತ್ನಿ ನಿರ್ಮಲಾರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಶ್ರೀಮತಿ ನಿರ್ಮಲ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ವೈ.ಎಸ್.ವಿ.ದತ್ತಾ ಅವರ ಕುಟುಂಬಕ್ಕೆ ಭಗವಂತ ನೀಡಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.