×
Ad

ಬ್ರಾಡ್ಮನ್, ಪಾಂಟಿಂಗ್ ದಾಖಲೆ ಹಿಂದಿಕ್ಕಿದ ವಿರಾಟ್ ಕೊಹ್ಲಿ

Update: 2018-08-23 14:50 IST

ಹೊಸದಿಲ್ಲಿ, ಆ.23: ಭಾರತದ ನಾಯಕ ವಿರಾಟ್ ಕೊಹ್ಲಿ ಬುಧವಾರ ಟ್ರೆಂಟ್‌ಬ್ರಿಡ್ಜ್‌ನ ನಾಟಿಂಗ್‌ಹ್ಯಾಮ್‌ನಲ್ಲಿ ಕೊನೆಗೊಂಡ ಮೂರನೇ ಟೆಸ್ಟ್ ಕ್ರಿಕೆಟ್‌ನಲ್ಲಿ ಏಳನೇ ಬಾರಿ ಪಂದ್ಯವೊಂದರಲ್ಲಿ 200 ಹಾಗೂ ಅದಕ್ಕಿಂತ ಹೆಚ್ಚು ರನ್ ಗಳಿಸಿ ತಂಡದ ಗೆಲುವಿಗೆ ನೆರವಾದ ಮೊದಲ ಟೆಸ್ಟ್ ನಾಯಕನೆಂಬ ಕೀರ್ತಿಗೆ ಭಾಜನರಾದರು. ಮೂರನೇ ಟೆಸ್ಟ್‌ನಲ್ಲಿ ಭಾರತ 203 ರನ್‌ಗಳಿಂದ ಜಯ ಸಾಧಿಸಿ ಆತಿಥೇಯರ ವಿರುದ್ಧ ಟೆಸ್ಟ್ ಸರಣಿಯಲ್ಲಿ ಮೊದಲ ಜಯ ಸಾಧಿಸಿತ್ತು.

ಇದೇ ವೇಳೆ, ಕೊಹ್ಲಿ ಆಸ್ಟ್ರೇಲಿಯದ ಇಬ್ಬರು ದಿಗ್ಗಜ ಆಟಗಾರರಾದ ಡಾನ್ ಬ್ರಾಡ್ಮನ್ ಹಾಗೂ ರಿಕಿ ಪಾಂಟಿಂಗ್ ದಾಖಲೆಯನ್ನು ಮುರಿದರು. ಈ ಇಬ್ಬರು ತಲಾ 6 ಬಾರಿ ಟೆಸ್ಟ್ ಪಂದ್ಯವೊಂದರಲ್ಲಿ 200 ಹಾಗೂ ಅದಕ್ಕಿಂತ ಹೆಚ್ಚು ಸ್ಕೋರ್ ಗಳಿಸಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದ್ದರು.

ಬ್ರಾಡ್ಮನ್ ಇಂಗ್ಲೆಂಡ್ ವಿರುದ್ಧ 4 ಹಾಗೂ ಭಾರತ ವಿರುದ್ಧ ಎರಡು ಬಾರಿ ಈ ಸಾಧನೆ ಮಾಡಿದ್ದರು. ಪಾಂಟಿಂಗ್ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕ ವಿರುದ್ಧ ತಲಾ 2 ಬಾರಿ, ವೆಸ್ಟ್‌ಇಂಡೀಸ್ ಹಾಗೂ ಇಂಗ್ಲೆಂಡ್ ವಿರುದ್ಧ ತಲಾ ಒಂದು ಬಾರಿ ಈ ಸಾಧನೆ ಮಾಡಿದ್ದರು. ಕೊಹ್ಲಿ ಇಂಗ್ಲೆಂಡ್ ವಿರುದ್ಧ 3 ಬಾರಿ, ವೆಸ್ಟ್‌ಇಂಡೀಸ್, ನ್ಯೂಝಿಲೆಂಡ್, ಬಾಂಗ್ಲಾದೇಶ ಹಾಗೂ ಶ್ರೀಲಂಕಾ ವಿರುದ್ಧ ತಲಾ ಒಂದು ಬಾರಿ 200 ಹಾಗೂ ಅದಕ್ಕಿಂತ ಹೆಚ್ಚು ರನ್ ಗಳಿಸಿ ತಂಡದ ಗೆಲುವಿನ ರೂವಾರಿಯಾಗಿದ್ದರು.

  ಭಾರತದ ನಾಯಕರ ಪೈಕಿ ಎಂ.ಎಸ್. ಧೋನಿ ಮಾತ್ರ ಪಂದ್ಯವೊಂದರಲ್ಲಿ 200 ಹಾಗೂ ಅದಕ್ಕಿಂತ ಹೆಚ್ಚು ಸ್ಕೋರ್ ಗಳಿಸಿ ಗೆಲುವಿಗೆ ನೆರವಾಗಿದ್ದರು. ಮಾಜಿ ನಾಯಕ ಧೋನಿ 2013ರಲ್ಲಿ ಆಸ್ಟ್ರೇಲಿಯ ವಿರುದ್ಧ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ 224 ರನ್ ಗಳಿಸಿದ್ದರು.

  ಕೊಹ್ಲಿ ನಾಯಕನಾಗಿ 10ನೇ ಬಾರಿ 200 ಹಾಗೂ ಅದಕ್ಕಿಂತ ಹೆಚ್ಚು ಸ್ಕೋರ್ ಗಳಿಸಿ ಹೊಸ ದಾಖಲೆ ನಿರ್ಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News