ಸಂವಿಧಾನ ಸುಟ್ಟ ಪ್ರಕರಣ: ಆ. 26ರಂದು ದಸಂಸದಿಂದ ಪ್ರತಿಭಟನೆ
ಉಡುಪಿ, ಆ.23: ಹೊಸದಿಲ್ಲಿಯಲ್ಲಿ ಸಂವಿಧಾನಕ್ಕೆ ಬೆಂಕಿ ಇಟ್ಟು ಸುಟ್ಟ ದೇಶದ್ರೋಹಿ ಕೃತ್ಯದ ವಿರುದ್ಧ ಹಾಗೂ ಇಂಥ ದೇಶದ್ರೋಹಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟ, ದಲಿತ ಧಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಹಾಗೂ ಸಹಭಾಗಿ ಸಂಘಟನೆಗಳ ವತಿಯಿಂದ ಆ.26ರ ರವಿವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಅಪರಾಹ್ನ 3 ಗಂಟೆಗೆ ಬೋರ್ಡ್ ಹೈಸ್ಕೂಲ್‌ನಿಂದ ಪ್ರತಿಭಟನಾ ಜಾಥ ಹಾಗೂ ಅಜ್ಜರಕಾಡು ಹುತಾತ್ಮ ಸೈನಿಕ ಸ್ಮಾರಕದ ಬಳಿ ಬಹಿರಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನ ಭಾಷಣಕಾರರಾಗಿ ಆತ್ರಾಡಿ ಅಮೃತಾ ಡೀಕಯ್ಯ ಹಾಗೂ ಇತರರು ಭಾಗವಹಿಸಲಿದ್ದಾರೆ.
ಸಂವಿಧಾನದ ನೆರವಿನಿಂದ ಸ್ವಾಭಿಮಾನದ ಬದುಕು ನಡೆಸುತ್ತಿರುವರೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ದಸಂಸ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ದಸಂಸ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಮತ್ತು ದಲಿತ ಧಮನಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಶ್ಯಾಮ್‌ರಾಜ್ ಬಿರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.