×
Ad

ಉಡುಪಿ: ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ

Update: 2018-08-23 21:25 IST

ಉಡುಪಿ, ಆ.23: ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 2ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

ಗುರುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಶ್ರೀಕೃಷ್ಣ ಜಯಂತಿ ಪ್ರಯುಕ್ತ ಅಂಗನವಾಡಿ ಮಕ್ಕಳಿಂದ ಕೃಷ್ಣ ಮತ್ತು ರಾಜ ವೇಷ ಹಾಕಿಕೊಳ್ಳುವ ಕಾರ್ಯಕ್ರಮ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸುವಂತೆ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಯಾದವ ಸಮುದಾಯದ ಪುಟ್ಟಣ್ಣ, ಶಂಕರಗೊಲ್ಲ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News