ಕೊಡಗು: ಪ್ರವಾಹದಿಂದ ಪಿಯು ಅಂಕಪಟ್ಟಿ ಕಳೆದುಕೊಂಡಿದ್ದರೆ ಚಿಂತೆಬೇಡ; ಇಲ್ಲಿದೆ ಪರಿಹಾರ

Update: 2018-08-23 16:02 GMT

ಬೆಂಗಳೂರು, ಆ. 23: ಮಳೆ-ಪ್ರವಾಹದಿಂದ ದಾಖಲಾತಿ ಕಳೆದುಕೊಂಡಿರುವ ಕೊಡಗು ಜಿಲ್ಲೆ ವಿದ್ಯಾರ್ಥಿಗಳ ನೆರವಿಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ಧಾವಿಸಿದ್ದು, ದಾಖಲೆ ಕಳೆದುಕೊಂಡಿರುವ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಭಯ ನೀಡಿದೆ.

ದಾಖಲಾತಿ ಕಳೆದುಕೊಂಡ ವಿದ್ಯಾರ್ಥಿಗಳು ತಾವು ಓದಿದ ಕಾಲೇಜಿಗೆ ಹೋಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಿಗೆ ನೀಡಲಿದ್ದು, ಆ ಬಳಿಕ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿ ನೀಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಉಪ ನಿರ್ದೇಶಕಿ ಶಿಖಾ ತಿಳಿಸಿದ್ದಾರೆ.

ಸತತ ಮಳೆ-ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಣೆಯಿಂದ ಹಾಜರಾತಿ ಕೊರತೆ ಆತಂಕ ಯಾವುದೇ ವಿದ್ಯಾರ್ಥಿಗಳಿಗೆ ಬೇಡ. ದಸರಾ ಸೇರಿ ಇನ್ನಿತರ ರಜೆಗಳಲ್ಲಿ ವಿಶೇಷ ತರಗತಿ ನಡೆಸಿ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News