ಮಂಡ್ಯ: ದುಷ್ಕರ್ಮಿಗಳಿಂದ ಬಾರ್ ಗೆ ಬೆಂಕಿ

Update: 2018-08-23 18:20 GMT

ಮಂಡ್ಯ, ಆ.23: ದುಷ್ಕರ್ಮಿಗಳು ಬಾರ್ ಅಂಡ್ ರೆಸ್ಟೋರೆಂಟ್‍ಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿರುವ ಘಟನೆ ಮದ್ದೂರಿನ ಶಿವಪುರದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ನ್ಯೂ ಗೌಡ ಗಾರ್ಡನ್ ಬಾರ್ ಅಂಡ್ ರೆಸ್ಟೋರೆಂಟ್‍ಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದು, ತಕ್ಷಣ ಬಾರ್ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೃತ್ಯ ಬಾರ್ ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News