ಕೊಡಗು ಪ್ರಕೃತಿ ವಿಕೋಪ: ಕರ್ತವ್ಯ ಲೋಪವೆಸಗಿದ ನಾಲ್ವರು ಅಧಿಕಾರಿಗಳ ಅಮಾನತು

Update: 2018-08-25 13:06 GMT
ಜಿಲ್ಲಾಧಿಕಾರಿ ಶ್ರೀವಿದ್ಯಾ

ಮಡಿಕೇರಿ, ಆ.25: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಡಿ ಹಾನಿಯುಂಟಾಗಿದ್ದು, ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿಭಾಯಿಸಬೇಕಾಗಿದೆ. ಆದರೆ ಕೆಲವು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಲ್ಲದೆ ಸಚಿವರು ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾದ ಸಭೆಗಳಿಗೂ ಹಾಜರಾಗದೆ, ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡುವಂತೆ ಪದೇ ಪದೇ ಸೂಚನೆ ನೀಡಿದರೂ ನಿರ್ಲಕ್ಷಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕೆ.ಆರ್.ಐ.ಡಿ.ಎಲ್. ಮಡಿಕೇರಿಯ (ಹುಣಸೂರು ವಿಭಾಗ) ಕಾರ್ಯಪಾಲಕ ಅಭಿಯಂತರ ಪಾಂಡುರಂಗ, ಸಹಾಯಕ ಕಾರ್ಯಪಾಲಕ ಅಭಿಯಂತರ ರಮೇಶ್, ಸಹಾಯಕ ಅಭಿಯಂತರ ಪ್ರಮೋದ್ ಹಾಗೂ ಜವಾಬ್ದಾರಿಯುತ ಅಧಿಕಾರಿಯಾಗಿದ್ದು, ಕರ್ತವ್ಯ ನಿರ್ಲಕ್ಷ್ಯ ಹಾಗೂ ಅಸಡ್ಡೆತನ ತೋರಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿಯಾಗಿರುವ ಜಯಲಕ್ಷ್ಮಿ ಬಾಯಿ ಅವರುಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News