ಬೆಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆ
Update: 2018-08-25 22:55 IST
ಬೆಂಗಳೂರು, ಆ.25: ತಂದೆಯ ಮೊಬೈಲ್‌ಗೆ ಎಸ್‌ಎಂಎಸ್ ಕಳುಹಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜ್ಞಾನಭಾರತಿಯ ಆರ್‌ಆರ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅಖಿಲೇಶ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಪೊಲೀಸರು ತಿಳಿಸಿದ್ದು, ಈತ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಕೋಲಾರದಲ್ಲಿರುವ ತನ್ನ ತಂದೆಯ ಮೊಬೈಲ್‌ಗೆ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಎಸ್‌ಎಂಎಸ್ ಕಳುಹಿಸಿ ಕೊಠಡಿಯಲ್ಲೇ ಫ್ಯಾನಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಜ್ಞಾನಭಾರತಿ ಪೊಲೀಸರು ತಿಳಿಸಿದ್ದಾರೆ.