×
Ad

ಆ.27ರಿಂದ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ಪುನರಾರಂಭ : ಜಿಲ್ಲಾಧಿಕಾರಿ

Update: 2018-08-26 18:32 IST

ಮಡಿಕೇರಿ,ಆ.26: ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದ್ದ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಅಂಗನವಾಡಿಗಳು ಆ.27ರಿಂದ ಎಂದಿನಂತೆ ಪುನರಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ.

ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಆ.25ರವರೆಗೂ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಪ್ರಸಕ್ತ ಮಳೆ ಕಡಿಮೆಯಾಗಿರುವುದರಿಂದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಡಿಕೇರಿ ನಗರದ ಪುನರ್ವಸತಿ ಕೇಂದ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳನ್ನು ಆ.27ರಿಂದ ಪುನರಾರಂಭಿಸಲಾಗುವುದು. ಅಲ್ಲದೆ ಪುನರ್ವಸತಿ ಕೇಂದ್ರಗಳಲ್ಲಿರುವ ಮಕ್ಕಳನ್ನು ಹತ್ತಿರದಲ್ಲಿರುವ ಶಾಲೆಗಳಿಗೆ ಸೇರಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುವುದು. ಪುನರ್ವಸತಿ ಕೇಂದ್ರಗಳಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲೆಲ್ಲಿ ವಸತಿ ಸೌಲಭ್ಯ ಸಾಧ್ಯವಿದೆಯೋ ಅಂತಹ ಶಾಲೆಗಳಲ್ಲಿ ದಾಖಲಿಸಿಕೊಂಡು ಪಾಠಪ್ರವಚನದ ಜೊತೆಗೆ ಸಂಬಂಧಿಸಿದ ಶಾಲೆ ಮುಖ್ಯಶಿಕ್ಷಕರ ಮೇಲ್ವಿಚಾರಣೆಯಲ್ಲಿ ವಸತಿ ಸೌಲಭ್ಯಗಳನ್ನು ಕಲ್ಪಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News