ಬದುಕಿನಲ್ಲಿ ತಾಳ್ಮೆ ವಹಿಸಿದರೆ ಯಶಸ್ಸು ಸಾಧ್ಯ: ಎಸ್ಪಿ ನಿಂಬರ್ಗಿ

Update: 2018-08-26 14:24 GMT

ಉಡುಪಿ, ಆ. 26: ಒಂದಕ್ಷಕರ ಕಲಿಸಿದ ತಾಯಿ ಹಾಗೂ ಪೊಷಕರು ಕೂಡ ನಮಗೆ ಗುರು ಸಮಾನರು. ಬದುಕಿನಲ್ಲಿ ತಾಳ್ಮೆ ಎಂಬುದು ಬಹಳ ಮುಖ್ಯ. ಅದರಿಂದ ಯಶಸ್ಸು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕೆಟ್ಟ ಚಟಗಳಿಗೆ ಒಳಗಾಗದೆ ಕಾನೂನು ಪಾಲಿಸುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸ ಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬಿ. ನಿಂಬರ್ಗಿ ಹೇಳಿದ್ದಾರೆ.

ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ, ವಿದ್ಯಾ ಪೋಷಕ್, ಯಕ್ಷಗಾನ ಕಲಾರಂಗದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 14ನೆ ವರ್ಷದ ವಿನಮ್ರ ಸಹಾಯ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಮಾತನಾಡಿ, ದೇವರ ಅನುಗ್ರಹ ಮತ್ತು ಕರ್ತವ್ಯ ಪ್ರಜ್ಞೆಯಿಂದ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಸಿಂಡಿ ಕೇಟ್ ಬ್ಯಾಂಕಿನ ಮಹಾಪ್ರಬಂಧಕ ಭಾಸ್ಕರ ಹಂದೆ, ಉಡುಪಿ ಆದರ್ಶ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್, ಹುಬ್ಬಳ್ಳಿ ಮೈಲೈಫ್‌ನ ಪ್ರವೀಣ್ ಗುಡಿ, ರಂಗನಿರ್ದೇಶಕ ಎಂ.ಜಯರಾಮ್ ಪಾಟೀಲ್, ಮಠದ ದಿವಾನ ವೇದವ್ಯಾಸ ತಂತ್ರಿ, ನಿವೃತ್ತ ಪ್ರಬಂಧಕ ಬಾಬುರಾಯ, ಗಂಗಾಧರ ರಾವ್ ಉಪಸ್ಥಿತರಿದ್ದರು.

ಕಲಾರಂಗದ ಅಧ್ಯಕ್ಷ ಗಣೇಶ್ ರಾವ್ ಸ್ವಾಗತಿಸಿದರು. ಮನೋಹರ್ ಕೆ. ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News