ಸಾಗರ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೈಕ್; ಯುವತಿ ಮೃತ್ಯು
Update: 2018-08-26 21:23 IST
ಸಾಗರ, ಆ. 26: ಇಲ್ಲಿನ ಸಿಗಂದೂರು ರಸ್ತೆ ಚಿಪ್ಪಳಿ ಬಳಿ ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿ ಮೃತಪಟ್ಟ ಘಟನೆ ನಡೆದಿದೆ.
ಬೈಕ್ ಹಿಂಬದಿ ಕುಳಿತಿದ್ದ ಪವಿತ್ರ ಎಂಬವರ ತಲೆಗೆ ತೀವ್ರ ಗಾಯಗೊಂಡ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಬೈಕ್ ಸವಾರ ಸುನೀಲ್ ರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಭದ್ರಾವತಿಯಿಂದ ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದು, ಚಿಪ್ಪಳಿ ಬಳಿ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉಂಟಾದ ಅಪಘಾತ ದಲ್ಲಿ ಪವಿತ್ರ ಮೃತಪಟ್ಟಿದ್ದಾರೆ.
ಈ ಬಗ್ಗೆ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.