ಮುಂದಿನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಈ ಅಗ್ರಗಣ್ಯ ನಾಯಕನನ್ನು ಆಹ್ವಾನಿಸಲಿರುವ ಆರೆಸ್ಸೆಸ್?

Update: 2018-08-27 10:15 GMT

ಹೊಸದಿಲ್ಲಿ, ಆ.27: ಮುಂದಿನ ವರ್ಷ ದಿಲ್ಲಿಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ಆರೆಸ್ಸೆಸ್ ಮುಂದಾಗಿದೆ ಎಂದು ವರದಿಯಾಗಿದೆ.

ಸೆಪ್ಟಂಬರ್ 17ರಿಂದ 19ರವರೆಗೆ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ಮಾತ್ರವಲ್ಲದೆ ಸೀತಾರಾಮ್ ಯೆಚೂರಿಯವರನ್ನೂ ಆಹ್ವಾನಿಸಲು ಆರೆಸ್ಸೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಸಮಾವೇಶವನ್ನುದ್ದೇಶಿಸಿ ಆರೆಸ್ಸೆಸ್ ನಾಯಕ ಮೋಹನ್ ಭಾಗವತ್ ಮಾತನಾಡಲಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಚಾರ ಭಾರೀ ವಿವಾದ ಸೃಷ್ಟಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News