ಅಪೆಕ್ಸ್ ಬ್ಯಾಂಕಿನ 43ನೆ ನೂತನ ಶಾಖೆ ಉದ್ಘಾಟನೆ: ಗ್ರಾಹಕ ಸ್ನೇಹಿ ವ್ಯವಹಾರಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ

Update: 2018-08-27 12:36 GMT

ಬೆಂಗಳೂರು, ಆ. 27: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದ 43ನೆ ನೂತನ ಶಾಖೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ಉದ್ಘಾಟಿಸಿದರು.

ಸೋಮವಾರ ಇಲ್ಲಿನ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿನ ಬ್ಯಾಂಕಿನ ನೂತನ ಶಾಖೆಯನ್ನು ಟೇಪು ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಚಿವ ಕೃಷ್ಣ ಭೈರೇಗೌಡ, ಸಹಕಾರಿ ಅಪೆಕ್ಸ್ ಬ್ಯಾಂಕ್ ಗ್ರಾಹಕ ಸ್ನೇಹಿಯಾಗಿ ಹೆಚ್ಚಿನ ವ್ಯವಹಾರ ಮತ್ತು ವಹಿವಾಟು ನಡೆಸಲಿ ಎಂದು ಹಾರೈಸಿದರು.

ಬ್ಯಾಂಕಿನ ನೂತನ ಶಾಖೆ ಉದ್ಘಾಟನೆ ನೆರವೇರಿಸಿದ ಸಚಿವ ಕೃಷ್ಣ ಭೈರೇಗೌಡ ಅವರನ್ನು, ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ, ಶಾಲು ಹೊದಿಸಿ-ಹೂವಿನ ಹಾರ ಹಾಕಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಕೆ.ಎನ್.ರಾಜಣ್ಣ, ನಿರ್ದೇಶಕ ಡಿ. ಹನುಮಂತಯ್ಯ, ಉದ್ಯಮಿ ಹಾಗೂ ಕೊಡವ ಸಮಾಜದ ಮಾಜಿ ಅಧ್ಯಕ್ಷ ಬಿ.ಎಂ. ಅಣ್ಣಯ್ಯ, ಬ್ಯಾಂಕಿನ ಸಿಇಓ ಸಿ.ಎನ್.ದೇವರಾಜ್, ಪ್ರಧಾನ ವ್ಯವಸ್ಥಾಪಕರಾದ ಬಿ.ಜಿನೇಶ್, ಜಂಗಮಪ್ಪ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News