ಸ್ಥಳೀಯ ಸಂಸ್ಥೆ ಚುನಾವಣೆ: ರಜೆ ಘೋಷಣೆಗೆ ಸೂಚನೆ
Update: 2018-08-27 20:21 IST
ಬೆಂಗಳೂರು, ಆ. 27: ರಾಜ್ಯದ 21 ಜಿಲ್ಲೆಗಳ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆ ಚುನಾವಣೆ ಆ.31ರ ಶುಕ್ರವಾರ ನಡೆಯಲಿದ್ದು, ಮತ ಚಲಾಯಿಸುವ ಅನುಕೂಲ ಆಗುವಂತೆ ಕಚೇರಿಗಳು, ಶಾಲಾ-ಕಾಲೇಜು ಒಳಗೊಂಡಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಿ ಸಂವಿಧಾನಾತ್ಮಕ ಹಕ್ಕು ಚಲಾಯಿಸಲು ಅನುವು ಮಾಡಿಕೊಡಬೇಕು. ಇಲ್ಲವಾದರೆ ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕಾರ್ಮಿಕ ಇಲಾಖೆ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.