ಪ್ರತಿ ಶನಿವಾರ ಮಾತ್ರ ಸಿಎಂ ಸಾರ್ವಜನಿಕರ ಭೇಟಿ

Update: 2018-08-27 15:00 GMT

ಬೆಂಗಳೂರು, ಆ. 27: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಇರುವ ಸಂದರ್ಭಗಳಲ್ಲಿ ಪ್ರತಿ ಶನಿವಾರ ಬೆಳಗ್ಗೆ 11ಗಂಟೆಯಿಂದ ಸಂಜೆ 4.30ರ ವರೆಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ಅಹವಾಲುಗಳು ಸೇರಿದಂತೆ ಯಾವುದೇ ಖಾಸಗಿ ಅಹವಾಲು ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ವೈದ್ಯಕೀಯ ಪರಿಹಾರ ನಿಧಿಗೆ ಕೋರಿಕೆ ಸಲ್ಲಿಸುವವರು ಆಧಾರ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್, ಆಸ್ಪತ್ರೆಯ ಬಿಲ್ಲುಗಳು ಮತ್ತು ಚಿಕಿತ್ಸೆಯ ವಿವರಗಳ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಸರಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಮಾತ್ರ ಸಾರ್ವಜನಿಕರು ಲಿಖಿತ ಮನವಿ ಸಲ್ಲಿಸುವುದು. ಮುಖ್ಯಮಂತ್ರಿ ಸಲಹೆ-ಸೂಚನೆಯಂತೆ ತೆಗೆದುಕೊಳ್ಳಲಾದ ಕ್ರಮಗಳನ್ನು ಮೊಬೈಲ್ ಎಸ್‌ಎಂಎಸ್ ಮೂಲಕ ಮಾಹಿತಿ ಒದಗಿಸಲಾಗುವುದು.

ಅನಿಯಮಿಯತವಾಗಿ ಸಾರ್ವಜನಿಕರು ಕುಮಾರಸ್ವಾಮಿಯವರ ಜೆ.ಪಿ.ನಗರದ ನಿವಾಸ, ಗೃಹ ಕಚೇರಿ ಕೃಷ್ಣಾ ಹಾಗೂ ವಿಧಾನಸೌಧಕ್ಕೆ ಭೇಟಿ ನೀಡುತ್ತಿರುವುದರಿಂದ ಸಿಎಂ ನಿಗದಿತ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಸಕಾಲಕ್ಕೆ ಭಾಗವಹಿಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಾರ್ವಜನಿಕ ಭೇಟಿಗೆ ಸಮಯವನ್ನು ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News