ಬೆಂಗಳೂರು: ಅಡುಗೆ ಅನಿಲ ಸ್ಫೋಟ
Update: 2018-08-27 20:42 IST
ಬೆಂಗಳೂರು, ಆ.27: ಬಿಡದಿ ಪೊಲೀಸ್ ವಸತಿ ಗೃಹದಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಶನಿವಾರ ನಡೆದಿದೆ.
ಬಿಡದಿ ಠಾಣೆ ಎಎಸ್ಸೈ ರಮೇಶ್ ಅವರ ಮನೆಯಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದ್ದು, ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ.