ಬೆಂಗಳೂರು: ಪತ್ನಿಯ ಕೊಲೆಯಲ್ಲಿ ಅಂತ್ಯಕಂಡ ದಂಪತಿಗಳ ನಡುವಿನ ಜಗಳ

Update: 2018-08-28 12:56 GMT

ಬೆಂಗಳೂರು, ಆ.28: ಕ್ಷುಲ್ಲಕ ವಿಚಾರವಾಗಿ ದಂಪತಿಗಳ ನಡುವೆ ಜಗಳ ನಡೆದು ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಸುದ್ದಗುಂಟೆಪಾಳ್ಯ ಪೂಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗುರಪ್ಪನಪಾಳ್ಯದ ನಿವಾಸಿ ಫಾಮಿದಾಬೇಗಂ (45) ಕೊಲೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗನಿಗೆ ಹೆಣ್ಣು ನೋಡುವ ವಿಚಾರವಾಗಿ ಸಂಜೆ ಫಾಮಿದಾಬೇಗಂ ದಂಪತಿ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ತಾಳ್ಮೆ ಕಳೆದುಕೊಂಡ ಈಕೆಯ ಪತಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಫಮಿದಾಬೇಗಂ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದುರೂ ಚಿಕಿತ್ಸೆ ಫಲಿಸದೆ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಈಕೆಯ ಪತಿ ಪರಾರಿಯಾಗಿದ್ದಾನೆ. ವೃತ್ತಿಯಲ್ಲಿ ಲಾರಿ ಚಾಲಕನಾಗಿರುವ ಈತನ ಪತ್ತೆಗೆ ಸುದ್ದಗುಂಟೆಪಾಳ್ಯ ಠಾಣೆ ಪೂಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News