ಆರೋಗ್ಯ ಕರ್ನಾಟಕ-ಆಯುಷ್ಮಾನ್ ವಿಲೀನಕ್ಕೆ ಚಿಂತನೆ: ಡಿ.ಕೆ.ಶಿವಕುಮಾರ್

Update: 2018-08-28 15:04 GMT

ಬೆಂಗಳೂರು, ಆ.28: ಕೇಂದ್ರ ಸರಕಾರದ ಆಯುಷ್ಮಾನ್ ಯೋಜನೆಯೊಂದಿಗೆ ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆಯನ್ನು ವಿಲೀನಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡು ಯೋಜನೆಗಳ ವಿಲೀನ ಸಂಬಂಧ ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದಿನ ಸಚಿವ ಸಂಪುಟದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಆಯುಷ್ಮಾನ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕವನ್ನು ವಿಲೀನಗೊಳಿಸಿದರೆ ರಾಜ್ಯಕ್ಕೆ 280 ಕೋಟಿ ರೂ.ಅನುದಾನ ದೊರೆಯಲಿದೆ. ಇಷ್ಟು ದೊಡ್ಡ ಮೊತ್ತದ ಅನುದಾನ ಸಿಗುವುದರಿಂದ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಅನುಕೂಲವಾಗಲಿದೆ. ಹೀಗಾಗಿ ಈ ಬಗ್ಗೆ ಸಚಿವ ಸಂಪುಟದಲ್ಲಿ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News