ಮೂಲಭೂತ ಹಕ್ಕು, ಕರ್ತವ್ಯಗಳ ಬಗ್ಗೆ ಅರಿವು ಅಗತ್ಯ: ಲತಾ

Update: 2018-08-28 16:05 GMT

ಉಡುಪಿ, ಆ.28: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲ್ಯಾಣಪುರ ಗೊರೆಟ್ಟಿ ಆಸ್ಪತ್ರೆ ಹಾಗೂ ವಕೀಲರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಲತಾ ಮಾತನಾಡಿ, ಪ್ರತಿಯೊಬ್ಬ ನಾಗರಿಕರು ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿತುಕೊಂಡು ಅದನ್ನು ಸರಿಯಾಗಿ ಪಾಲಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕಿ ಡಾ.ನಿರ್ಮಲಾ ಕುಮಾರಿ ಮಾತನಾಡಿ, ಯುವ ಜನತೆಯಲ್ಲಿ ಮೂಲಭೂತ ಕರ್ತವ್ಯ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಇವುಗಳನ್ನು ಉಪಯೋಗಿಸದೇ ಹೋದಲ್ಲಿ ಅದು ಸಮಾಜದ ಉದ್ಧಾರಕ್ಕೆ ಉಪಯೋಗಕ್ಕೆ ಬರುವುದಿಲ್ಲ. ಇದರ ಸವುರ್ಪಕ ಬಳಕೆಯಾಗಬೇಕು ಎಂದರು.

ಗೊರೆಟ್ಟಿ ಆಸ್ಪತ್ರೆಯ ಸಿಸ್ಟರ್ ಮೆಲನಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಿಲಾಗ್ರಿಸ್ ಕಾಲೇಜಿನ ರಸಾಯನ ಶಾಸ್ತ್ರದ ಮುಖ್ಯಸ್ಥ ಪ್ರೊ.ಸುಬ್ರಹ್ಮಣ್ಯ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಘಟಕದ ಯೋಜನಾಧಿಕಾರಿಗಳಾದ ರವಿ ನಂದನ್ ಹಾಗೂ ಅನುಪಮಾ ಜೋಗಿ ಉಪಸ್ಥಿತರಿದ್ದರು. ಅಮೃತಾ ಸ್ವಾಗತಿಸಿ ದರು. ಮಧುರಾ ವಂದಿಸಿದರು. ಸ್ವಾತಿ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News