ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಗಳು ವಜಾ

Update: 2018-08-28 16:58 GMT

ಬೆಂಗಳೂರು, ಆ.28: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣಗಳನ್ನು ಚುನಾಯಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ರದ್ದುಗೊಳಿಸಿದೆ.

ರಾಚೇನಹಳ್ಳಿ ಪ್ರಕರಣವೂ ಸೇರಿ ಒಟ್ಟು 15 ಪ್ರಕರಣಗಳ ಬಗ್ಗೆ ಬಿ.ಎಸ್. ಯಡಿಯೂರಪ್ಪ ಸೇರಿ ಐವರ ವಿರುದ್ಧ ಸಾಮಾಜಿಕ ಕಾರ್ಯಕರ್ತರಾದ ಸಿರಾಜಿನ್ ಬಾಷಾ ಮತ್ತು ಬಾಲಕೃಷ್ಣ ಎಂಬುವವರು 2011 ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು. ವಿಚಾರಣೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್‌ನಲ್ಲಿ ಪ್ರಕರಣಗಳನ್ನು ರದ್ದು ಮಾಡಲಾಗಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಎಸ್.ಆರ್.ಹಿರೇಮಠ್ ಅವರು ಸಿಬಿಐ ತನಿಖೆಗೆ ಮನವಿ ಮಾಡಿದ್ದರು. ಸಿಬಿಐ ತನಿಖೆ ನಂತರ ವಿಚಾರಣೆ ನಡೆಸಿದ ಸುಪ್ರೀಂ ಪ್ರಕರಣಗಳನ್ನು ರದ್ದು ಮಾಡಿತ್ತು. ಆದರೂ ಸಿರಾಜಿನ್ ಪಾಷಾ ಸಲ್ಲಿಸಿದ್ದ ದೂರು ಸೆಷನ್ಸ್ ಕೋರ್ಟ್ ನಲ್ಲಿ ಬಾಕಿ ಉಳಿದಿತ್ತು. ಮಂಗಳವಾರ ವಿಚಾರಣೆ ನಡೆಸಿದ ಸಂಸದರು, ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ.ಪಾಟೀಲ್ ಪ್ರಕರಣಗಳನ್ನು ರದ್ದು ಮಾಡಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News