×
Ad

ಉಡುಪಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

Update: 2018-08-28 23:20 IST

 ಉಡುಪಿ, ಆ.28:ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ಉಡುಪಿ ನಗರಸಭೆ, ಕುಂದಾಪುರ ಮತ್ತು ಕಾರ್ಕಳ ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆ.31ರಂದು ಮತದಾನ ನಡೆಯಲಿದ್ದು, ಶಾಂತಿಯುತ ಮತದಾನದ ಉದ್ದೇಶದಿಂದ ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚೆ ಅಂದರೆ ಆ.29ರ ಬೆಳಗ್ಗೆ 7 ಗಂಟೆಯ ನಂತರ ಬಹಿರಂಗ ಪ್ರಚಾರವನ್ನು ನಿಷೇಧಿಸಲಾಗಿದೆ.

ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ನಲ್ಲಿ ವಾರ್ಡ್‌ಗೆ ಸಂಬಂಧ ಪಡೆದ ರಾಜಕೀಯ ಪಕ್ಷದವರಾಗಲೀ ಅಥವಾ ಚುನಾವಣೆ ಪ್ರಚಾರಕ್ಕಾಗಿ ಹೊರಗಿಂದ ಬಂದವರಾಗಲಿ ಉಳಿಯುವಂತಿಲ್ಲ. ಚುನಾವಣೆಗೆ ಸಂಬಂಧಿಸಿದ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಏರ್ಪಡಿಸುವಂತಿಲ್ಲ. ಮತದಾರರಿಗೆ ಮೊಬೈಲ್ ಮೂಲಕ ಎಸ್‌ಎಂಎಸ್ ಕಳುಹಿಸುವಂತಿಲ್ಲ. ರೇಡಿಯೋ, ಟಿ.ವಿ. ಮೂಲಕ ಪ್ರಚಾರ ಮಾಡುವಂತಿಲ್ಲ.

ಈ ವಿಚಾರದ ಬಗ್ಗೆ ಎಲ್ಲಾ ಚುನಾವಣಾ ಅಭ್ಯರ್ಥಿಗಳಿಗೆ, ಎಲ್ಲಾ ಪಕ್ಷ ಮುಖಂಡರಿಗೆ ಸೂಕ್ತ ಸೂಚನೆಗಳನ್ನು ನೀಡುವಂತೆ ಹಾಗೂ ಯಾವುದೇ ಬಹಿರಂಗ ಪ್ರಚಾರ ಕೈಗೊಳ್ಳದಂತೆ ಅಪರ ಜಿಲ್ಲಾಧಿಕಾರಿ ಶ್ರೀವಿದ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News