ಪತ್ನಿ ಸಮೇತ ಬಿಜೆಪಿ ಸೇರಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರು

Update: 2018-08-29 08:17 GMT

ಬೆಂಗಳೂರು, ಆ.29: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್‌ಯಡಿಯೂರಪ್ಪರ ಸಮ್ಮುಖದಲ್ಲಿ ಬಾಬುರಾವ್ ಅವರು ಪತ್ನಿ ಅಮರೇಶ್ವರಿ ಚಿಂಚನಸೂರು ಜೊತೆಗೆ ಬಿಜೆಪಿ ಸೇರಿದರು. ಅವರನ್ನು ಪಕ್ಷದ ಪತಾಕೆ ನೀಡುವ ಮೂಲಕ ಯಡಿಯೂರಪ್ಪ ಬರಮಾಡಿಕೊಂಡರು.

ಈ ಸಂದರ್ಭ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ, ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ಡಿ.ಎಸ್.ವೀರಯ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News