ಮಾದಕ ದ್ರವ್ಯ -ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Update: 2018-08-29 12:50 GMT

ಶಿರ್ವ, ಆ.29: ಬಂಟಕಲ್ಲಿನ ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ವಿಭಾಗ ಹಾಗೂ ರೋಟರ್ಯಾಕ್ಟ್ ಘಟಕಗಳ ಸಹಯೋಗದೊಂದಿಗೆ ಮಾದಕ ದ್ರವ್ಯ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಆ.28ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್ ಮಾದಕ ದ್ರವ್ಯಗಳ ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಮಾದಕದ್ರವ್ಯದ ಉತ್ಪಾದನೆ, ಮಾರಾಟ, ಖರೀದಿ ಮತ್ತು ಬಳಸುವಿಕೆಗೆ ಸಂಬಂಧಿಸಿದ ಅಪರಾಧಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಶಿರ್ವ ಪೋಲಿಸ್ ಠಾಣೆಯ ಠಾಣಾಧಿಕಾರಿ ಅಬ್ದುಲ್ ಖಾದರ್ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್, ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕ ಕಿಶೋರ್ ಕುಮಾರ್ ಆರೂರ್ ಉಪಸ್ಥಿತರಿದ್ದರು. ತನುಷಾ ಶೆಟ್ಟಿ ಕಾರ್ಯಕ್ರಮ ನಿರೂ ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News